

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕ್ಲಾಸಿಕ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿ ವಿನೋದ ಮುಳ್ಳೂರ ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್‌ಗೆ ಆಯ್ಕೆಯಾಗಿದ್ದಾನೆ. ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಯಂಗ್ ಇಂಡಿಯನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿನೋದ, ಜಿಲ್ಲೆಯಿಂದ ಆಯ್ಕೆಯಾಗಿದ್ದಾನೆ. ಡಿ. 1ರಂದು ದೆಹಲಿಯಲ್ಲಿ ನಡೆಯುವ ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾನೆ ಎಂದು ಕ್ಲಾಸಿಕ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.