ನಟ ವಿನೋದ್‌ರಾಜ್ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ

Vinod-Raj
Published on

ಬೆಂಗಳೂರು: ಕಿಡಿಗೇಡಿಗಳು ಫೇಸ್‌ಬುಕ್‌ನಲ್ಲಿ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅಶ್ಲೀಲ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ವಿನೋದ್‌ರಾಜ್ ನೀಡಿದ ದೂರಿನ ಮೇರೆಗೆ ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣದ ದಾಖಲಿಸಿದ್ದಾರೆ.

ಯಾರೋ ಅಪರಿಚಿತರು ಉದ್ದೇಶಪೂರ್ವವಾಗಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಅದರಲ್ಲಿ ಪ್ರತಿದಿನ ಅಸಭ್ಯ ಬರಹಗಳಿರುವ ಅಶ್ಲೀಲ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿನೋದ್‌ರಾಜ್ ದೂರಿನಲ್ಲಿ ವಿವರಿಸಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net