ಉಪಾಧ್ಯಕ್ಷೆಯಾಗಿ ವಿನುತಾ ಪಾತಿಕಲ್ಲು ಆಯ್ಕೆ

3
Published on

ಸುಳ್ಯ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಹರೀಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶ ಅವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ವಿನುತಾ ಪಾತಿಕಲ್ಲು ಮಂಡೆಕೋಲು ಗ್ರಾಪಂ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿದ್ದಾರೆ. ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾಗಿ, ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net