ಮಾನವ ಹಕ್ಕುಗಳ ಉಲ್ಲಂಘನೆ ಅಪರಾಧ

26arsph1ep
ಬಸವರಾಜೇಂದ್ರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾಯಾಧೀಶ ಕಿರಣ್ ಕುಮಾರ್ ಡಿ.ವಡಿಗೇರ ಉದ್ಘಾಟಿಸಿದರು. ದಯಾನಂದ್, ಸಿದ್ದಮಲ್ಲಪ್ಪ, ವಿರೂಪಾಕ್ಷ, ಮಲ್ಲೇಶ್, ಜಮೀಲ್ ಪಾಷಾ ಇದ್ದರು.
Published on

ಅರಸೀಕೆರೆ: ಮಾನವ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಕಿರಣ್ ಕುಮಾರ್ ಡಿ.ವಡಿಗೇರ ಹೇಳಿದರು.

ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ವತಿಯಿಂದ ನಗರದ ಬಸವರಾಜೇಂದ್ರ ಪ್ರೌಢಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಆಫ್ರಿಕಾ ಸೇರಿದಂತೆ ಹಲವೆಡೆ ವರ್ಣದ ಆಧಾರದ ಮೇಲೆ ಮನುಷ್ಯರನ್ನು ಮೇಲು, ಕೀಳು ಎಂಬುದಾಗಿ ಗುರುತಿಸಲಾಗುತ್ತಿತ್ತು. ಇಂತಹ ನಿಯಮಗಳನ್ನು ಕಾನೂನು ಒಪ್ಪಲು ಸಾಧ್ಯವಿಲ್ಲ. ಮಾನವ ಕುಲ ತಾನೊಂದೇವಲಂ ಎನ್ನುವ ತತ್ವದಡಿ ಎಲ್ಲರೂ ಒಟ್ಟಾಗಿ ಅರ್ಥ ಪೂರ್ಣ ಜೀವನ ನಡೆಸಬೇಕು. ಜಾತಿ, ವೃತ್ತಿ, ವರ್ಣದ ಆಧಾರದಲ್ಲಿ ತಾರತಮ್ಯ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ಕಾರಣಕ್ಕೂ ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.

ಹಿರಿಯ ವಕೀಲ ಸಿದ್ದಮಲ್ಲಪ್ಪ ಮಾತನಾಡಿ, ಸ್ವಾತಂತ್ರ್ಯ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಸಂವಿಧಾನದಲ್ಲಿ ವಿಶೇಷ ಕಾನೂನು ರೂಪಿಸಲಾಗಿದೆ. ವಿದ್ಯಾರ್ಥಿಗಳು ಶಾಲಾ ದಿಸೆಯಲ್ಲಿ ಉತ್ತಮ ಹವ್ಯಾಸ ರೂಢಿಸಿಕೊಳ್ಳುವ ಮೂಲಕ ಸತ್ಪ್ರಜೆಗಳಾಗಿ ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಶಿಕ್ಷಣ ಸಂಯೋಜಕ ಮಲ್ಲೇಶ್, ಪ್ರೌಢಶಾಲೆ ಮುಖ್ಯಶಿಕ್ಷಕ ದಯಾನಂದ್, ವಕೀಲರಾದ ತೊಂಡಿಗನಹಳ್ಳಿ ವಿರೂಪಾಕ್ಷ, ಜಮೀಲ್ ಪಾಷಾ ಮಾತನಾಡಿದರು. ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net