ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ

24 mlv1
ಮಳವಳ್ಳಿ ಪಟ್ಟಣದ ಶಾದಿ ಮಹಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 8ನೇ ತಾಲೂಕು ಸಮ್ಮೇಳನದಲ್ಲಿ ಸಂಘಟನೆ ರಾಜ್ಯ ಕಾರ್ಯದರ್ಶಿ ದೇವಿ ಮಾತನಾಡಿದರು. ತಾಲೂಕು ಅಧ್ಯಕ್ಷೆ ಮಂಜುಳಾ, ಜಿಲ್ಲಾಧ್ಯಕ್ಷೆ ಲತಾ, ಕಾರ್ಯದರ್ಶಿ ಸುಶೀಲಾ, ಪದ್ಮಾ, ಪ್ರೇಮಾ, ಜಯಶೀಲಾ ಇದ್ದರು.
Published on

ಮಳವಳ್ಳಿ: ದೇಶದೆಲ್ಲೆಡೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ದಬ್ಬಾಳಿಕೆ, ದೌರ್ಜನ್ಯ, ಲೈಂಗಿಕ ಶೋಷಣೆ ಹೆಚ್ಚುತ್ತಿವೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಶಾದಿ ಮಹಲ್‌ನಲ್ಲಿ ಗುರುವಾರ ಆಯೋಜಿಸಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 8ನೇ ತಾಲೂಕು ಸಮ್ಮೇಳನದಲ್ಲಿ ಮಾತನಾಡಿ, ಪೈಶಾಚಿಕವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಹತ್ಯೆ ನಡೆಸುವ ಆರೋಪಿಗಳಿಗೆ ಆಡಳಿತ ವ್ಯವಸ್ಥೆಯೇ ಕುಮ್ಮಕ್ಕು ನೀಡಿ ಅವರ ಬೆಂಬಲಕ್ಕೆ ನಿಲ್ಲುತ್ತಿದೆ. ಇದರಿಂದ ದುರುಳರಿಗೆ ಕಾನೂನು ರಕ್ಷಣೆ ಸಿಕ್ಕಂತಾಗಿದೆ. ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವಗಳನ್ನು ಹೂತುಹಾಕಿರುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಈಗಾಗಲೇ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆ 164 ಹೇಳಿಕೆ ದಾಖಲಿಸಿದ್ದಾರೆ. ಇದು ಮಹಿಳೆಯರ ಮೇಲಿನ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದೆ. ನಿಜಕ್ಕೂ ಈ ಪ್ರಕರಣಗಳು ಸತ್ಯವೇ ಆಗಿದ್ದರೆ ಇಡಿ ವಿಶ್ವದ ಎದುರು ನಮ್ಮ ದೇಶದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗುತ್ತದೆ. ಈ ಪ್ರಕರಣದ ಸೂಕ್ಷ್ಮತೆ ಅರಿತು ರಾಜಕಾರಣಿಗಳು ತಮ್ಮ ಪ್ರಭಾವ ಬೀರಬಾರದು. ಸರ್ಕಾರ ಅಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆ ಮಾಡಿರುವ ವಿಶೇಷ ತನಿಖಾ ತಂಡವು ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ಸತ್ಯಾಂಶ ಹೊರ ತೆಗೆಯಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ತಾಲೂಕು ಅಧ್ಯಕ್ಷೆ ಮಂಜುಳಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಲತಾ, ಕಾರ್ಯದರ್ಶಿ ಸುಶೀಲಾ, ಪದ್ಮಾ, ಪ್ರೇಮಾ, ಜಯಶೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net