ಹಿಂಸಾಚಾರ, ಕೋಮುದ್ವೇಷ ಬಿಜೆಪಿ ರಾಜಕೀಯ ಅಸ್ತ್ರ

7bdvt1
ಭದ್ರಾವತಿ ತಾಲೂಕು ಕಚೇರಿ ಎದುರು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ತಾಲೂಕು ಅಧ್ಯಕ್ಷ ಮಹಮದ್ ಗೌಸ್, ಜಿಲ್ಲಾ ಕಾರ್ಯದರ್ಶಿ ಮಹಮದ್ ಖಲೀಂ, ಮಹಮದ್ ತಾಯರ್, ದೇವೇಂದ್ರಪ್ಪ ಸೇರಿ ಇತರರಿದ್ದರು.
Published on

ಭದ್ರಾವತಿ: ದಕ್ಷಿಣ ಕನ್ನಡದಲ್ಲಿ ಸಂಘ ಪರಿವಾರ ಹರಡಿದ ದ್ವೇಷದ ನಂಜು ಇಡೀ ದೇಶಕ್ಕೆ ಹಬ್ಬಿದ್ದು ಮತೀಯ ಹಿಂಸಾಚಾರ, ಜನಾಂಗೀಯ ಕಲಹ ದೇಶವನ್ನು ಹೊತ್ತಿ ಉರಿಯುವಂತೆ ಮಾಡಿದೆ ಎಂದು ಆರೋಪಿಸಿ ಸೋಮವಾರ ತಾಲೂಕು ಕಚೇರಿ ಎದುರು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಣಿಪುರದಲ್ಲಿ ಜನಾಂಗೀಯ ಕಲಹ, ಹರಿಯಾಣದಲ್ಲಿ ಕೋಮುಗಲಭೆ, ಮಹಾರಾಷ್ಟ್ರದಲ್ಲಿ ರೈಲಿನಲ್ಲಿ ನಡೆದ ಅಮಾಯಕರ ಬಲಿ ಸೇರಿ ದೇಶದ ನಾನಾ ಭಾಗಗಳಲ್ಲಿ ಹಿಂಸಾಚಾರ ಹಬ್ಬಿಕೊಂಡಿದೆ. ಇಂತಹ ಸನ್ನಿವೇಶಕ್ಕೆ ಕಾರಣವಾದ ಬಿಜೆಪಿ ಹಾಗೂ ಸಂಘಪರಿವಾರದ ದ್ವೇಷದ ರಾಜಕಾರಣವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಗೆ ಹಿಂಸಾಚಾರ ಕೋಮುದ್ವೇಷ ರಾಜಕೀಯ ಅಸ್ತ್ರವಾಗಿದೆ. ಆ ಕಾರಣಕ್ಕಾಗಿಯೇ ಮೂರು ತಿಂಗಳಿನಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಶಾಂತಿ ಕಾಪಾಡುವ ಯಾವುದೇ ಪ್ರಯತ್ನ ಮಾಡಲಿಲ್ಲ. ಇಂತಹ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ಮಹಮದ್ ಗೌಸ್, ಜಿಲ್ಲಾ ಕಾರ್ಯದರ್ಶಿ ಮಹಮದ್ ಖಲೀಂ, ಮಹಮದ್ ತಾಯರ್, ದೇವೇಂದ್ರಪ್ಪ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net