ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ

FotoJet
Published on

* ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಧ್ಯಕ್ಷ ಕೃಷ್ಣೇಗೌಡ ಎಚ್ಚರಿಕೆ

ಬಿಡದಿ ; ವಿವಿಧ ಬೇಡಿಕೆಗಳನ್ನು ಎರಡು ತಿಂಗಳೊಳಗೆ ಈಡೇರಿಸದಿದ್ದರೆ ಅಕ್ಟೋಬರ್‌ನಲ್ಲಿ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಧ್ಯಕ್ಷ ಪಿ.ಕೃಷ್ಣೇಗೌಡ ಎಚ್ಚರಿಸಿದರು.

ಕಣಮಿಣಿಕೆ ಬಳಿಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕಾರಿಣಿ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು, ನರೇಗಾ ಹಣ ದುರ್ಬಳಕೆಗೆ ಕಡಿವಾಣ ಹಾಕಬೇಕು, ಕಳಪೆ ದಿನಸಿ ವಸ್ತುಗಳು ಹಾಗೂ ಬೆಲೆ ಏರಿಕೆ ನಿಯಂತ್ರಿಸಬೇಕು, ಮೇಕೆದಾಟು ಯೋಜನೆ ಕೂಡಲೇ ಜಾರಿಗೊಳಿಸಬೇಕು, ಕಾವೇರಿ, ತುಂಗಭದ್ರಾ, ಕೃಷ್ಣ, ಮಹದಾಯಿ, ಭೀಮಾ ನದಿಯ ನೀರು ಕನ್ನಡ ನಾಡಿನ ರೈತರಿಗೆ ಮೀಸಲಿರಿಸುವ ಕುರಿತು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕುಂಬಳಗೋಡು ಗ್ರಾಪಂ ಅಧ್ಯಕ್ಷ ದೇವರಾಜು ಮಾತನಾಡಿದರು. ಕುಂಬಳಗೋಡು ಗ್ರಾಪಂ ಉಪಾಧ್ಯಕ್ಷ ಗೋಪಾಲಕೃಷ್ಣ, ರಾಮನಗರ ಜಿಲ್ಲಾಧ್ಯಕ್ಷ ಕಿರಣ್ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಸುಬ್ರಮಣ್ಯ, ಉತ್ತರ ಕರ್ನಾಟಕ ವಿಭಾಗೀಯ ಅಧ್ಯಕ್ಷ ಲಕ್ಷ್ಮಣ ಕಂಬಾಗಿ, ರಾಜ್ಯ ಸಮಿತಿ ಸದಸ್ಯ ಶ್ರೀಧರ್, ಬಸವರಾಜ್ ಹವಲ್ದಾರ್, ಬೆಟ್ಟೇಗೌಡ, ಸಮಾ ಸೇವಕ ಭರತ್ ಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net