ರಾಸಾಯನಿಕ ವಿಪತ್ತು ಎದುರಾದಾಗ ಇಲಾಖೆಗಳ ಕರ್ತವ್ಯ ಏನು ಗೊತ್ತಾ?

ಅಣುಕು ಪ್ರದರ್ಶನ 1
Published on

ಮಳವಳ್ಳಿ: ತಾಲೂಕಿನ ತೊರೆಕಾಡನಹಳ್ಳಿ ಗ್ರಾಮದಲ್ಲಿನ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಶುಕ್ರವಾರ ರಾಜ್ಯ ಮಟ್ಟದ ರಾಸಾಯನಿಕ ವಿಪತ್ತುಗಳ ಅಣಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.
ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಕೆಲಸ ಮಾಡುವ ಕಾರ್ಮಿಕರು ಮಾಹಿತಿ ನೀಡಿದ ನಂತರ ಯಾವ ರೀತಿಯಾಗಿ ಸಮಸ್ಯೆಯನ್ನು ಬಗೆಹರಿಸಬೇಕು ಮತ್ತು ಅಪಾಯದಿಂದ ಪಾರಾಗುವಂತಹ ಮಾರ್ಗ ಸೂಚಿಯನ್ನು ಪ್ರದರ್ಶನ ನೀಡಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಅನಿಲ ಸೋರಿಕೆಯಾದ ಸ್ಥಳದಲ್ಲಿದ್ದ ಅಸ್ವಸ್ಥಗೊಂಡ ವ್ಯಕ್ತಿಗಳಿಗೆ ಪ್ರಥಮ ಚಿಕಿತ್ಸೆ ನೀಡುವಂಹ ಕಾರ್ಯವನ್ನು ಆರೋಗ್ಯ ಇಲಾಖೆಯು ಆಂಬುಲೆನ್ಸ್ ಸಹಾಯದೊಂದಿಗೆ ಕೈಗೊಂಡಿತು. ಅಗ್ನಿಶಾಮಕದಳದ ಸಿಬ್ಬಂದಿ ಅನಿಲ ಸೋರಿಕೆಯನ್ನು ನಿಯಂತ್ರಿಸುವ ಕೆಲಸ ನಿರ್ವಹಿಸಿದರು. ಪೊಲೀಸ್ ಇಲಾಖೆಯು ಜನ ಸಂದಣಿಯಾಗದಂತೆ ರಕ್ಷಣಾ ಕಾರ್ಯಗಳು ಸುಗಮವಾಗಿ ನಡೆಯುವಂತೆ ಕೆಲಸ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶದ ಜನ ಸಾಮಾನ್ಯರಿಗೆ ಅನಿಲ ಸೋರಿಕೆ ಹಾಗೂ ಇನ್ನಿತರ ಅವಗಡ ತಡೆಯುವ ಕುರಿತು ಅಣುಕು ಪ್ರದರ್ಶನ ಕಾರ್ಯಾಚರಣೆ ಮಾಡಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಲಾಯಿತು.

ಉಪವಿಭಾಗಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಕಾರ್ಖಾನೆಗಳ ಸಹಾಯಕ ನಿರ್ದೇಶಕ ಎಚ್.ಸುರೇಶ್, ವಿಪತ್ತು ನಿರ್ವಹಣಾ ಪರಿಣಿತರಾದ ಪುನೀತ್, ಕಾರ್ಯಪಾಲಕ ಅಭಿಯಂತರ ನರೇಶ್, ಜಂಟಿ ನಿರ್ದೇಶಕ ಶಿವಲಿಂಗಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net