ಬಾಧಿತರಿಗೆ ಪ್ರಥಮ ಚಿಕಿತ್ಸೆ ಅತ್ಯಾವಶ್ಯಕ: ಎಡಿಸಿ ಡಾ.ಎಚ್.ಎಲ್.ನಾಗರಾಜು ಸಲಹೆ

22_01_Mdy_05(Vipathu)
Published on

ಮಂಡ್ಯ: ಅವಘಡಗಳು ಸಂಭವಿಸಿದಾಗ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವುದರ ಜತೆಗೆ ಪ್ರಥಮ ಚಿಕಿತ್ಸೆ ನೀಡುವುದು ಅತ್ಯವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸಲಹೆ ನೀಡಿದರು.

ನಗರದ ನೆಹರು ಯುವ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯ ಪಡೆ, ನೆಹರು ಯುವ ಕೇಂದ್ರ, ಎನ್‌ಸಿಸಿ ಘಟಕ, ಪಿಇಎಸ್ ಕಲಾ ವಾಣಿಜ್ಯ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಮಹಿಳಾ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ವಿಪತ್ತು ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.

ಇಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ. ಪ್ರಾಕೃತಿಕವಾಗಿ ಅಥವಾ ಮಾನವ ನಿರ್ಮಿತ ವಿಕೋಪಗಳು ಆದಾಗ ಅವುಗಳನ್ನ ನಿರ್ವಹಣೆ ಮಾಡಲು ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿದುಕೊಂಡಿರಬೇಕು. ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಾಗ, ನೀರು ಹರಿಯುವ ನಾಲೆಗಳಲ್ಲಿ ಯಾರಾದರೂ ಮುಳುಗಿದಾಗ, ಬಸ್ ಅಪಘಾತ ಸಂಭವಿಸಿದಾಗ, ಅಪಘಾತಕ್ಕೆ ಒಳಗಾದ ವ್ಯಕ್ತಿಗಳ ಜೀವ ಉಳಿಸಲು ಎಚ್ಚರ ವಹಿಸಬೇಕಾದ ಕೆಲವು ವಿಧಾನಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಎನ್‌ಡಿಆರ್‌ಎ್ ಇನ್ಸ್‌ಪೆಕ್ಟರ್ ಶಿವಕುಮಾರ್, ಎಂ.ಎಸ್.ಮಠಪತಿ, ಸಂದೀಪ್‌ಸಿಂಗ್, ಡಾ.ಕೆಂಪಮ್ಮ, ಕೆ.ಪಿ.ಅರುಣ ಕುಮಾರಿ, ಪುನೀತ್ ಇತರರಿದ್ದರು. ಇದೇ ಸಂದರ್ಭದಲ್ಲಿ ಎನ್‌ಡಿಆರ್‌ಎ್ ತಂಡದವರು ವಿಪತ್ತು, ಅವಘಡ, ಅಪಘಾತ ಸಂಭವಿಸಿದಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net