ಸಚಿವ ಡಿ.ಸುಧಾಕರ್ ವಿರುದ್ಧ ವಿಪ್ರ ಸಂಘಟನೆ ಆಕ್ರೋಶ

16 smg 3
ಸಚಿವ ಡಿ.ಸುಧಾಕರ್ ಹೇಳಿಕೆ ಖಂಡಿಸಿ ವಿವಿಧ ವಿಪ್ರ ಸಂಘಟನೆಗಳ ಪ್ರಮುಖರು ಡಿಸಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. ದೀನ್ ದಯಾಳು, ಸುರೇಶ್ ನಾಡಿಗ್, ನಾಗೇಶ್, ಕೇಶವಮೂರ್ತಿ, ರಾಜು ಇತರರಿದ್ದರು.
Published on

ಶಿವಮೊಗ್ಗ: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಡಿ.ಸುಧಾಕರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ವಿಪ್ರ ಸಂಘಟನೆಗಳ ಪ್ರಮುಖರು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಚಿವ ಡಿ.ಸುಧಾಕರ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದಲ್ಲದೆ, ಪವಿತ್ರವಾದ ಜನಿವಾರದ ಬಗ್ಗೆ ಅತ್ಯಂತ ಕೀಳುಮಟ್ಟದ ಪದ ಬಳಕೆ ಮಾಡಿದ್ದಾರೆ. ಬ್ರಾಹ್ಮಣ ಸಮಾಜವನ್ನು ನಿಂದಿಸಿದ್ದಾರೆ. ಆದ್ದರಿಂದ ಅವರು ಕೂಡಲೆ ಬ್ರಾಹ್ಮಣ ಸಮುದಾಯದ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರಮುಖರಾದ ದೀನದಯಾಳು, ಸುರೇಶ್ ನಾಡಿಗ್, ನಾಗೇಶ್, ಕೇಶವಮೂರ್ತಿ, ರಾಜು, ವೆಂಕಟೇಶ್, ಪ್ರಭಾಕರ್, ರಾಘವೇಂದ್ರ ಉಡುಪ, ಶ್ಯಾಮಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net