ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿರಬೇಕು

10 vpt 1.1
Published on

ವಿರಾಜಪೇಟೆ : ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿದ್ದು, ಜ್ಞಾನಾರ್ಜನೆ ಕಡೆಗೆ ಗಮನ ಹರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಕೆ.ಮಂಜುಳಾ ಹೇಳಿದರು.
ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ಘಟಕ, ಮಾದಕ ದ್ರವ್ಯ ವಿರೋಧಿ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ. ಶಾಲಾ ಕಾಲೇಜಿನೊಳಗೆ ಪಾಠ ನಡೆಯುವ ಸಂದರ್ಭ ಕಲಿಕೆಗೆ ಗಮನ ಕೊಡಿ. ಎಲ್ಲಾ ಕೆಲಸಗಳಿಗೂ ಸಮಯವೇ ಮುಖ್ಯ ಎಂಬುದನ್ನು ಮರೆಯಬೇಡಿ. ಅವಶ್ಯ ಇದ್ದಾಗ ಮಾತ್ರ ಮೊಬೈಲ್ ಫೋನ್ ಬಳಕೆ ಮಾಡಿ. ಇಲ್ಲವಾದರೆ ಗೊತ್ತಿಲ್ಲದ ಹಾಗೆ ಮೊಬೈಲ್ ಪೋನ್ ನಿಮ್ಮನ್ನು ದಾರಿ ತಪ್ಪಿಸುತ್ತದೆ ಎಂದು ಅವರು ಕಿವಿಮಾತು ಹೇಳಿದರು. ಸರ್ಕಾರ ನೀಡುತ್ತಿರುವ ಹಲವು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು, ಕಾಲೇಜಿಗೂ, ಪಾಲಕರಿಗೂ ಗೌರವ ತನ್ನಿ. ಸಮಾಜ ಸೇವಕರಾಗುವ ನಿಟ್ಟಿನಲ್ಲಿ ಆಸಕ್ತಿ ರೂಢಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಗೆ ದಾಸರಾಗಬೇಡಿ ಎಂದು ಅವರು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net