ಮನ್ಸೂರ್ ಆಲಿ, ಕೊಡಂಗೇರಿ ಯೂಸೂಫ್ ಜೆಡಿಎಸ್ ಟಿಕೆಟ್‌ಗೆ ಅರ್ಜಿ

30mdkn3 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಜಾತ್ಯತೀತ ಜನತಾದಳ ಅಭ್ಯರ್ಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ.

ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ, ಕೊಡಂಗೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಡಂಗೇರಿ ಯೂಸೂಫ್ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಝಕರಿಯಾ ಝಾಕಿರ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರಿಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿ ದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net