ವಿರಾಜಪೇಟೆಯಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ

10vtp1 protest
Published on

ವಿರಾಜಪೇಟೆ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ನೌಕರರ ಸಂಘದ ಸದಸ್ಯರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮನವಿ ಸ್ವೀಕರಿಸಿದ ಉಪತಹಸೀಲ್ದಾರ್ ಪೊನ್ನು ಮಾತನಾಡಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಹೇಳಿದರು.

ಭೂಮಾಪನ ಅಧಿಕಾರಿ ಬಾನಂಗಡ ಅರುಣ್ ಮಾತನಾಡಿ, ಕೆಲವರು ವಿವಿಧ ಸಂಘ ಸಂಸ್ಥೆಗಳ ಹೆಸರನ್ನು ಹೇಳಿಕೊಂಡು ನಮ್ಮ ಮೇಲೆ ಒತ್ತಡ ಹೇರುತ್ತಾರೆ. ಪಾನಮತ್ತರಾಗಿ ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ನಿರ್ಭೀತಿಯಿಂದ ಕೆಲಸ ಮಾಡಲು ಅಗತ್ಯ ರಕ್ಷಣಾ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್.ಗುರುರಾಜ್, ಕಾರ್ಯದರ್ಶಿ ಬಿ.ಟಿ. ದೇವರಾಜ್, ಖಜಾಂಚಿ ಎ.ಬಿ ಲಲಿತಾ, ಕಂದಾಯ ನೌಕರರ ಸಂಘದ ಉಪಾಧ್ಯಕ್ಷ ಪಳಂಗಪ್ಪ, ಸಂಘಟನಾ ಕಾರ್ಯದರ್ಶಿ ಎ.ವಿ ಮಂಜುನಾಥ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net