ಆರೋಗ್ಯದ ಅರಿವು ಎಲ್ಲರಿಗೂ ಮುಖ್ಯ

3 vpt 2.1
Published on

ವಿರಾಜಪೇಟೆ :ಸಮೀಪದ ಬೇಟೋಳಿ ರಾಮನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ರಜಾಕ್ ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,ಆರೋಗ್ಯ ಪಾಲನೆ ಅರಿವು ಎಲ್ಲರಿಗೂ ಮುಖ್ಯ ಎಂದರು.
ಅಂಗನವಾಡಿ ಕೇಂದ್ರಕ್ಕೆ ಬೇಟೋಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಣಿ, ಆರೋಗ್ಯ ಇಲಾಖೆ ಮೇಲ್ವಿಚಾರಕಿ ಡಾ. ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮನಗರ ಅಂಗನವಾಡಿ ಕಾರ್ಯಕರ್ತೆ ರತಿ, ಆಶಾ ಕಾರ್ಯಕರ್ತೆ ಶೀಲಾಮಣಿ, ಸಹಾಯಕಿ ನಿರ್ಮಲಾ, ಮಕ್ಕಳು, ಪಾಲಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net