ವಿರಾಟಪುರ ವಿರಾಗಿ ಪ್ರದರ್ಶನ ನಾಡಿದ್ದು

600800
ಪಂಪನಗೌಡ ತಾವರಗೇರಾ
Published on

ಸಿಂಧನೂರು: ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ‘ವಿರಾಟಪುರ ವಿರಾಗಿ’ ಸಿನಿಮಾ ಮಾ.5ರಂದು ನಗರದ ಟೌನ್‌ಹಾಲ್‌ನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಪಂಪನಗೌಡ ತಾವರಗೇರಾ ಹೇಳಿದರು.

ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರಕನ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಸಿನಿಮಾವಾಗಿರುವುದು ಸಂತಸದ ಸಂಗತಿ. ಈ ಚಿತ್ರವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ, ಅಶೋಕ ವಿ.ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಚಿತ್ರಕ್ಕಿದೆ. ಹಾನಗಲ್ ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ ಅಭಿನಯಿಸಿದ್ದಾರೆ.

ಭಕ್ತಿ ಬಳಗ, ವೀರಶೈವ ಲಿಂಗಾಯತ ಮಹಾಸಾಭಾ ಹಾಗೂ ವೀರಶೈವ ಮಹಾಸಭಾ ಸಹಯೋಗದಲ್ಲಿ ಈ ಸಿನಿಮಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಜಡೆಲಿಂಗ ಶಿವಯೋಗಿ, ವಳಬಳ್ಳಾರಿಯ ಸಿದ್ಧಲಿಂಗ ಸ್ವಾಮೀಜಿ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ ಆಗಮಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ ಮಾತನಾಡಿ, ವೀರಶೈವ ಸಮಾಜವನ್ನು ಸ್ಥಾಪಿಸಿದ ಕುಮಾರ ಶಿವಯೋಗಿಗಳ ಜೀವನಾಧಾರಿತ ಸಿನಿಮಾವನ್ನು ಪ್ರತಿಯೊಬ್ಬರೂ ನೋಡಿ ಅರ್ಥೈಸಿಕೊಳ್ಳುವುದು ಅತ್ಯವಶ್ಯಕ. ಮಾ.5 ರಂದು ಬೆಳಗ್ಗೆ 9 ಗಂಟೆಗೆ ಕುಮಾರ ಶಿವಯೋಗಿಗಳ ಜಯಂತ್ಯುತ್ಸವ ಕಾರ್ಯಕ್ರಮ, 11 ಗಂಟೆಯಿಂದ 2ರವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ 6 ರವರೆಗೆ ಸಿನಿಮಾ ಪ್ರದರ್ಶನವಾಗಲಿದೆ ಎಂದರು. ಪ್ರಮುಖರಾದ ದೊಡ್ಡನಗೌಡ ಕಲ್ಲೂರು, ಉಮೇಶ ಪಾಟೀಲ್, ಚಂದ್ರಶೇಖರ ಪಾಟೀಲ್, ಮಹಾಂತೇಶ ಬಪ್ಪೂರ, ತಿರುಮಲರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net