ವೀರೇಂದ್ರ ಹೆಗ್ಗಡೆ ತೇಜೋವಧೆ ಖಂಡನೀಯ

Humbuja Sree
ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ
Published on

ರಿಪ್ಪನ್‌ಪೇಟೆ: ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ತರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ತರು ನ್ಯಾಯಾಂಗ ತನಿಖೆಗೆ ಸಹಕರಿಸಬೇಕು. ಹೆಗ್ಗಡೆಯವರೂ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿ, ಕುಟುಂಬ ಅಥವಾ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ವೀರೇಂದ್ರ ಹೆಗ್ಗಡೆ ಅವರ ಮತ್ತು ಧರ್ಮಸ್ಥಳ ಕ್ಷೇತ್ರದ ಸಾಮಾಜಿಕ ಪ್ರಗತಿಯನ್ನು ಸಹಿಸದ ಕೆಲ ವ್ಯಕ್ತಿಗಳು ಆರೋಪ ಮಾಡುತ್ತಿರುವುದನ್ನು ಕೂಡಲೆ ನಿಲ್ಲಿಸಬೇಕು. ಕ್ಷೇತ್ರದ ಭಕ್ತಾಭಿಮಾನಿಗಳು ಶಾಂತಿಯಿಂದ ಕಾನೂನಿನ ಹೋರಾಟದಲ್ಲಿ ಹೆಗ್ಗಡೆ ಅವರ ಜತೆ ನಿಲ್ಲಬೇಕು ಮತ್ತು ಅಪಪ್ರಚಾರಗಳಿಂದಾಗಿ ಗೊಂದಲಕ್ಕೆ ಒಳಗಾಗಬಾರದು ಎಂದು ಸ್ವಾಮೀಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net