ಕನ್ಯೆ ಸಿಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮದ್ಯ ವೇಸನಿ

Boy Suside+1
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವನೆಯ ದಾಸನಾಗಿದ್ದ ವ್ಯಕ್ತಿಯೊಬ್ಬ ಯಾರೂ ಕನ್ಯೆ ಕೊಡಲಿಲ್ಲವೆಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಉಮಾಶಂಕರ ನಗರದಲ್ಲಿ ಗುರುವಾರ ನಡೆದಿದೆ.

ವೀರೇಶ ಮಹಾಬಲೇಶ್ವರ ಚಳಗೇರಿ (40) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಈತನಿಗೆ ಯಾರೂ ಕನ್ಯೆ ಕೊಟ್ಟಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net