ವೈರಸ್ ಟೆಸ್ಟಿಂಗ್ ಲ್ಯಾಬ್‌ಗೆ ಚಾಲನೆ

23manju1-Web
ಬೆಳಗಾವಿ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು. ಡಿಸಿಎಂ ಲಕ್ಷ್ಮಣ ಸವದಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಇನ್ನಿತರರು ಇದ್ದರು.
Published on

ಬೆಳಗಾವಿ: ನಗರದಲ್ಲಿ ಕರೊನಾ ವೈರಸ್ ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಿಸುವ ಪ್ರಯೋಗಾಲಯ ಆರಂಭವಾಗುತ್ತಿರುವುದರಿಂದ ತ್ವರಿತವಾಗಿ ವರದಿ ಕೈಸೇರಲಿದೆ. ಸಕಾಲಕ್ಕೆ ಚಿಕಿತ್ಸೆ ನೀಡಲು ನೆರವಾಗಲಿದೆ ಎಂದು ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

ನೆಹರು ನಗರದಲ್ಲಿರುವ ಕೇಂದ್ರ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಗೆ ಟೆಸ್ಟ್ ಲ್ಯಾಬ್ ಮಷಿನ್ ಬಂದಿರುವುದರಿಂದ ವರದಿ ವಿಳಂಬ ಸಮಸ್ಯೆ ಬಗೆಹರಿಯಲಿದ್ದು, ವೈದ್ಯರಿಗೆ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ. ಪ್ರತಿದಿನ 90 ಜನರ ಗಂಟಲು ದ್ರವ ಮಾದರಿ ಪರೀಕ್ಷಿಸುವ ಸಾಮರ್ಥ್ಯವನ್ನು ಈ ಪ್ರಯೋಗಾಲಯ ಹೊಂದಿದೆ. ಇದಕ್ಕಾಗಿ ವಿಜ್ಞಾನಿಗಳು, ವೈದ್ಯರು, ಸಿಬ್ಬಂದಿ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿ, ವಾಯವ್ಯ ಸಾರಿಗೆ ಸಂಸ್ಥೆಯ ಎಂಡಿ ರಾಜೇಂದ್ರ ಚೋಳನ್, ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ, ಐಸಿಎಂಆರ್- ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net