ಕಾರ್ನಾಡು ಹರಿಹರ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ

Mul_Karnadu
Published on

ಮೂಲ್ಕಿ: ಕಾರ್ನಾಡು ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ಕ್ಷೇತ್ರದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಹಯಗ್ರೀವ ಪಡ್ಡಿಲಾಯರ ಪ್ರಧಾನ ಪೌರೋಹಿತ್ಯದಲ್ಲಿ ಮಹಾಸುದರ್ಶನ ಹೋಮ, ಪುರುಷ ಸೂಕ್ತ ಹೋಮ, ವಿಷ್ಣು ಸಹಸ್ರನಾಮ ನಡೆಯಿತು.

ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಕಟೀಲು ಕ್ಷೇತ್ರದ ಅರ್ಚಕ ವೆಂಕಟರಮಣ ಆಸ್ರಣ್ಣ, ವಾದಿರಾಜ ಉಪಾಧ್ಯಾಯ ಕೊಲಕಾಡಿ, ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ, ವ್ಯವಸ್ಥಾಪನಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರಾದ ಜೀವನ್ ಶೆಟ್ಟಿ, ರವಿಕುಮಾರ್, ಶಶೀಂದ್ರ ಸಾಲ್ಯಾನ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ, ಹರ್ಷರಾಜ ಶೆಟ್ಟಿ, ಸುರೇಶ್ ರಾವ್, ವಿಷ್ಣುಮೂರ್ತಿ, ಪ್ರವೀಣ್ ಕೋಟ್ಯಾನ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net