ವಿಷ್ಣುವರ್ಧನ್ ಅಮೃತ ಮಹೋತ್ಸವ ಪೋಸ್ಟರ್ ಬಿಡುಗಡೆ

New Vishnuvardhana new
Published on

ಹುಬ್ಬಳ್ಳಿ: ಇಲ್ಲಿನ ಡಾ. ವಿಷ್ಣು ಸೇನಾ ಸಮಿತಿ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಅಕ್ಟೋಬರ್ 19ರಂದು ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ ಪೋಸ್ಟರ್ ಅನ್ನು ಸ್ವರ್ಣ ಸಮೂಹ ಸಂಸ್ಥೆಯ ಚೇರ್ಮನ್ ಡಾ. ವಿ.ಎಸ್.ವಿ. ಪ್ರಸಾದ ಅವರು ಮಂಗಳವಾರ ಬಿಡುಗಡೆಗೊಳಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ ಹಾಜರಿದ್ದರು.

ಅ. 19ರಂದು ಬೆಳಗ್ಗೆ 9.30ಕ್ಕೆ ಬಂಕಾಪುರ ಚೌಕದಿಂದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದವರೆಗೆ ಆಟೋ ಹಾಗೂ ಬೈಕ್ ಜಾಥಾ ಏರ್ಪಡಿಸಲಾಗಿದೆ. 11.30ಕ್ಕೆ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಡಾ. ವಿಷ್ಣುವರ್ಧನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸರ್ಕಾರಿ ಶಾಲೆಯ ಆಟೋ ಚಾಲಕರ ಮಕ್ಕಳಿಗೆ ಪಠ್ಯ ಸಾಮಗ್ರಿಗಳ ವಿತರಣೆ ನಡೆಯಲಿದೆ. ನಂತರ ಡಾ. ವಿಷ್ಣುವರ್ಧನ್ ಅವರ ಚಲನಚಿತ್ರಗಳ ಹಾಡು, ನೃತ್ಯಗಳ ರಸಮಂಜರಿ ಹಮ್ಮಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net