ದೇವಾಲಯಗಳಲ್ಲಿ ಸೌರಮಾನ ಯುಗಾದಿ ಮತ್ತು ವಿಷು ಹಬ್ಬಆಚರಣೆ, ಕಣಿ ಪೂಜೆ

Sub Vishu
ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಳದಲ್ಲಿ ವಿಷುಕಣಿಗೆ ಅರ್ಚಕರು ಪೂಜೆ ನೆರವೇರಿಸಿದರು
Published on

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಮತ್ತು ವಿಷು ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಭಾನುವಾರ ಆಚರಿಸಲಾಯಿತು.
ಶ್ರೀ ದೇವರ ಮುಂಭಾಗದಲ್ಲಿ ವಿಷುಕಣಿ ಇರಿಸಿ ಆರಂಭದಲ್ಲಿ ಶ್ರೀ ದೇವರಿಗೆ ವಿಷುಕಣಿ ದರ್ಶನ ಮಾಡಲಾಯಿತು. ನಂತರ ವಿಷು ಕಣಿಗೆ ಪೂಜೆ ನೆರವೇರಿಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಸೇರಿದಂತೆ, ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಭಕ್ತರು ಉಪಸ್ಥಿತರಿದ್ದರು.

ವಿವಿಧ ದೇವಳಗಳಲ್ಲಿ ಆಚರಣೆ

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ವಿವಿಧ ದೇವಾಲಯಗಳಲ್ಲಿ ವಿಷು ಹಬ್ಬವನ್ನು ಭಕ್ತಿಯಿಂದ ಆಚರಿಸಲಾಯಿತು. ಪೈಂದೋಡಿ ಸುಬ್ರಾಯ ದೇವಸ್ಥಾನ, ಎಡಮಂಗಲ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನ, ಬಳ್ಪ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹರಿಹರದ ಹರಿಹರೇಶ್ವರ ದೇವಸ್ಥಾನ, ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನ, ದೇವರಕಾನ ಲಕ್ಷ್ಮೀ ನರಸಿಂಹ ದೇವಸ್ಥಾನ, ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ, ಮರಕತ ದುರ್ಗಾಪರಮೇಶ್ವರಿ ದೇವಸ್ಥಾನ, ಕೇರ್ಪಡ ಮಹಿಷಮರ್ದಿನಿ ದೇವಸ್ಥಾನ, ಬಿಳಿನೆಲೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷುಕಣಿಯನ್ನು ಇರಿಸಿ ಪೂಜೆ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net