

ಉಡುಪಿ : ಸರ್ಕಾರಿ ಹಾಗೂ ಬ್ಯಾಂಕಿಂಗ್ ಉದ್ಯೋಗಳಲ್ಲಿ ಬಂಟ ಸಮುದಾಯದ ಪ್ರಾತಿನಿಧ್ಯ ಬಹಳಷ್ಟು ಕಡಿಮೆ ಇದೆ. ಹೀಗಾಗಿ ಸ್ಪರ್ಧಾತ್ಮಕ ಪರೀೆಯ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಬಂಟರ ಸಂಗಳು ಕಾಯೋರ್ನ್ಮುಖವಾಗಬೇಕು. ಇದರಿಂದ ಮಕ್ಕಳ ಭವಿಷ್ಯಕ್ಕೆ ಸಹಾಯವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ಶುಕ್ರವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಅ.28 ಮತ್ತು 29ರಂದು ನಡೆಯುವ ವಿಶ್ವ ಬಂಟರ ಸಮ್ಮೇಳನದ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಬಂಟ ಸಮಾಜದ ನೇತೃತ್ವದಲ್ಲಿರುವ ಬ್ಯಾಂಕಿಂಗ್ ಕ್ಷೇತ್ರವನ್ನು ವಿಸ್ತರಿಸಿದರೆ ಸ್ಥಳಿಯವಾಗಿ ಉದ್ಯೋಗ ಸೃಷ್ಟಿಸಲು ಸಾಧ್ಯ. ಕ್ರೀಡೆ ಮತ್ತು ಕಲೆಯಲ್ಲಿ ಸಾಧನೆ ಮಾಡಿದ ಯುವಕ&ಯುವತಿಯರಿಗೆ ರಾಷ್ಟ್ರಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಬೇಕು. ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಇದೆ. ಯುಪಿಎಸ್ಸಿ ಪರೀೆ ಬರೆಯುವವರು ಅರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಶೇ. 10ರಷ್ಟು ಮೀಸಲಾತಿ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಾಗತಿಕ ಬಂಟರ ಸಂಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, 28ರಂದು ಬೆಳಗ್ಗೆ 8 ಗಂಟೆಗೆ ಬೋರ್ಡ ಹೈಸ್ಕೂಲ್ನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ಸಾಲಂಕೃತ ಮೆರವಣಿಗೆ ನಡೆಯಲಿದ್ದು, ಪುತ್ತಿಗೆ ಮಠದಶ್ರೀ ಸುಗುಣೇಂದ್ರ ತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧಿಶ ತೀರ್ಥರು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ವಿಶ್ವಸಂತೋಷ ಸ್ವಾಮೀಜಿ, ಶ್ರೀ ಈಶವಿಠಲ ಸ್ವಾಮೀಜಿ, ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ ಉದ್ಘಾಟಿಸಲಿದ್ದಾರೆ. 10ಗಂಟೆಗೆ ವಿಶ್ವ ಬಂಟರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 10.30ಕ್ಕೆ ಕ್ರೀಡಾಕೂಟಕ್ಕೆ ಬ್ಯಾಡ್ಮಿಂಟನ್ ಆಡಗಾರ ಚಿರಾಗ್ ಶೆಟ್ಟಿ ಚಾಲನೆ ನೀಡಲಿದ್ದಾರೆ. 29ರಂದು 10 ಗಂಟೆಗೆ ಸಾಂಸತಿಕ ವೈಭವ ಸಮಾರಂಭವನ್ನು ಅಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ. ಮೋಹನ್ ಅಳ್ವಾ ಉದ್ಘಾಟಿಸಲಿದ್ದಾರೆ. ಗೃಹಸಚಿವ ಡಾ.ಜಿ. ಪರಮೇಶ್ವರ್ ಮುಖ್ಯ ಅತಿಥಿಗಳಾಗಿರುವರು. ಕಾರ್ಯಕ್ರಮದಲ್ಲಿ ಈಗಾಗಲೇ 32 ತಂಡಗಳು ಹೆಸರು ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದರು.
ಜಾಗತಿಕ ಬಂಟರ ಸಂಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಮಾತೃ ಸಂಘದ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟಪೂರ್ವ ಅಧ್ಯಕ್ಷ ಜಯರಾಜ್ ಹೆಗ್ಡೆ, ಪ್ರಮುಖರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಡಾ. ರೋಶನ್ ಶೆಟ್ಟಿ, ಪುರುಷೋತ್ತಮ್.ಪಿ.ಶೆಟ್ಟಿ, ಆರೂರು ಶ್ರೀಧರ್ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ಮನೋಹರ್.ಎಸ್. ಶೆಟ್ಟಿ, ದಿವಾಕರ್ ಶೆಟ್ಟಿ ಕೊಡವೂರು, ಮಟ್ಟಾರ್ ರತ್ನಾಕರ್ ಹೆಗ್ಡೆ, ಡಾ. ಭಾಸ್ಕರ್ ಶೆಟ್ಟಿ ಬೆಳ್ಳೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀಣೋರ್ದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.