

ಯಲ್ಲಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದ ಭರತನಾಟ್ಯ ಪರೀಕ್ಷೆಯಲ್ಲಿ ವಿಶ್ವದರ್ಶನ ಕೇಂದ್ರೀಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಳೆದ ಎಪ್ರಿಲ್ನಲ್ಲಿ ನಡೆದ ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದ ಪ್ರಾರಂಭಿಕ ಪರೀಕ್ಷೆಯಲ್ಲಿ ವಿಶ್ವದರ್ಶನ ಕೇಂದ್ರೀಯ ಶಾಲೆಯ ಭರತನಾಟ್ಯ ಶಾಸ್ತ್ರೀಯ ವಿಭಾಗದ ವಿದ್ಯಾರ್ಥಿಗಳಾದ ಚೇತನ, ಅಪೇಕ್ಷ, ಸಾನ್ವಿ, ದೀಪ್ತಿ , ಸ್ನಿಗ್ಧ, ಸಮೀಕ್ಷಾ, ಅನ್ವಿತಾ, ಸಿರಿ, ಮಹಾಲಕ್ಷ್ಮಿ, ಪ್ರಣತಿ ಅತ್ಯುನ್ನತ ಶ್ರೇಣಿಯಲ್ಲಿ, ಮಾನ್ಸಿ , ಚಿಂತನ, ಆರಾಧ್ಯ, ಉನ್ನತಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರವೇಶಿಕಾ ಪ್ರಥಮ ಪರೀಕ್ಷೆಯ ವಿಭಾಗದಲ್ಲಿ ಸಮನ್ವಿತ, ಅಷ್ಟಮಿ, ಸುಷ್ಮಾ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಕೇಂದ್ರೀಯ ಶಾಲೆಯ ಪ್ರಾಂಶುಪಾಲರು, ಮತ್ತು ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.