ಜ್ಞಾನದ ಬೆಳಕು ವಿಶ್ವಗುರು ಬಸವಣ್ಣ

KDR basava
ಕಡೂರು ತಾಲೂಕು ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಅನಾವರಣಗೊಳಿಸಲಾಯಿತು. ಶಾಸಕ ಕೆ.ಎಸ್.ಆನಂದ್, ಎಂ.ಪಿ.ಕವಿರಾಜ್, ಸಿ.ಆರ್.ಪ್ರವೀಣ್, ಅಶೋಕ್, ಡಾ. ಉಮೇಶ್ ಇತರರಿದ್ದರು.
Published on

ಕಡೂರು: ಅಂಧಶ್ರದ್ಧೆ ವಿರುದ್ಧ ವಚನಗಳ ಮೂಲಕ ಧ್ವನಿ ಎತ್ತಿ ಜನರಲ್ಲಿ ಜ್ಞಾನದ ಬೆಳಕು ನೀಡಿದ ಮಹಾನ್ ಮಾನವತಾವಾದಿ ಬಸವಣ್ಣ ಎಂದು ಶಾಸಕ ಕೆ.ಎಸ್.ಆನಂದ್ ಬಣ್ಣಿಸಿದರು.

ತಾಲೂಕು ಕಚೇರಿಯಲ್ಲಿ ಶನಿವಾರ ಸಾಂಸ್ಕೃತಿಕ ನಾಯಕ ಘೋಷವಾಕ್ಯದಡಿ ಬಸವಣ್ಣನ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳ ವಿರುದ್ಧ ಬಸವಣ್ಣನವರ ಸಾರಥ್ಯದಲ್ಲಿ ಕ್ರಾಂತಿ ನಡೆಯಿತು. ಅವರ ತತ್ವ, ಚಿಂತನೆಗಳು ಇಂದಿಗೂ ಪ್ರಸ್ತುತ. ವಿಶ್ವಗುರು ಬಸವಣ್ಣನವರ ಅನುಭವಮಂಟಪದಲ್ಲಿ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡಲಾಗಿತ್ತು ಎಂದರು.
ತಹಸೀಲ್ದಾರ್ ಎಂ.ಪಿ.ಕವಿರಾಜ್, ತಾಪಂ ಇಒ ಸಿ.ಆರ್. ಪ್ರವೀಣ್, ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್, ಕೃಷಿ ಸಹಾಯಕ ನಿರ್ದೇಶಕ ಅಶೋಕ್, ಡಾ. ಉಮೇಶ್, ಎಇಇ ರವಿಶಂಕರ್, ಕಂದಾಯ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net