

ಸುತ್ತೂರು: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೊ ಹಾಕುವಂತೆ ನನ್ನ ಅವಧಿಯಲಿಯೇ ಆದೇಶ ನೀಡಿದ್ದೆ. ಈಗ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ. ಹಾಗಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೋದ ಕೆಳಗೆ ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ ಎಂದು ಬರೆಸಬೇಕು. ಈ ಬಗ್ಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.