ವಿಶ್ವಕರ್ಮ ಸಮುದಾಯ ಎಲ್ಲರಿಗೂ ಮಾದರಿ

kota (3)
Published on

ಕೋಟ: ವಿಶ್ವಕರ್ಮ ಸಮುದಾಯ ಎಲ್ಲ ಸಮುದಾಯಗಳಿಗಿಂತ ಅತಿ ಸಣ್ಣ ಸಮುದಾಯವಾಗಿದೆ. ಆದರೆ ಆ ಸಮುದಾಯ ಎಲ್ಲರಿಗೂ ಮಾದರಿಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಮಂಗಳವಾರ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿ ವೃತ್ತಿನಿರತರಿಗೆ ಅನುಕೂಲ ಮಾಡಿಕೊಟ್ಟಿದೆ. ಅದರ ಸೌಲಭ್ಯಗಳನ್ನು ಎಲ್ಲರೂ ಸದುಪಯೋಗಿಸಿಕೊಳ್ಳಬೇಕು. ವಿಶ್ವಕರ್ಮ ಯಜ್ಞ ಮಹೋತ್ಸವ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.

ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಘಟಕ ಅಧ್ಯಕ್ಷ ಎಂ.ಸುಬ್ರಾಯ ಆಚಾರ್ ವಹಿಸಿದ್ದರು. ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ.ಕುಂದರ್, ಸಾಲಿಗ್ರಾಮ ಪಂಪ ಅಧ್ಯಕ್ಷೆ ಸುಕನ್ಯಾ ಜೆ.ಶೆಟ್ಟಿ, ವಿಶ್ವಜ್ಯೋತಿ ಮಹಿಳಾ ಬಳಗ ಅಧ್ಯಕ್ಷೆ ರಮ್ಯಾ ರಮೇಶ್ ಆಚಾರ್ ಉಪಸ್ಥಿತರಿದ್ದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಪ್ರದರ್ಶನಗೊಂಡಿತು.

ವಿಶ್ವಕರ್ಮ ಕಲಾವೃಂದ ಅಧ್ಯಕ್ಷ ವೆಂಕಟೇಶ ಆಚಾರ್ ಸ್ವಾಗತಿಸಿದರು. ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಗೌರವಾಧ್ಯಕ್ಷ ಚೇಂಪಿ ಜನಾರ್ದನ ಆಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾಮೋದರ ಶರ್ಮ ನಿರೂಪಿಸಿದರು. ಕೇಶವ ಆಚಾರ್ ವಂದಿಸಿದರು.

ಸನ್ಮಾನ, ಪ್ರತಿಭಾಪುರಸ್ಕಾರ

ಮುಂಬೈ ಒಎನ್‌ಜಿಸಿ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಹಾಗೂ ಗಾಯಕ ವಿದ್ವತ್ ಯಶವಂತ್ ಎಂ.ಜಿ. ಅವರನ್ನು ಅಭಿನಂದಿಸಲಾಯಿತು. ವೃತ್ತಿ ಹಿರಿಯ ಸಾಧಕರಾದ ಗುಂಡ್ಮಿ ನಾರಾಯಣ ಆಚಾರ್ ದಂಪತಿ, ಕಾರ್ಕಡ ರಂಗಯ್ಯ ಆಚಾರ್ ದಂಪತಿಯನ್ನು ಸನ್ಮಾನಿಸಲಾಯಿತು. ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ದಿ.ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ನಿಧಿಗೆ ಚಾಲನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net