15ರಂದು ವಿಶ್ವಕರ್ಮ ಸಮ್ಮೇಳನ

Published on

ಕಾಸರಗೋಡು: ರಾಷ್ಟ್ರೀಯ ವಿಶ್ವಕರ್ಮ ಫೆಡರೇಶನ್ (ಎನ್‌ವಿಎಫ್) ನೇತೃತ್ವದಲ್ಲಿ ವಿಶ್ವಕರ್ಮ ಸಮುದಾಯದ ಅಗತ್ಯಗಳು ಮತ್ತು ಹಕ್ಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಡಿ.15ರಂದು ಕಾಸರಗೋಡು ನಗರ ಸಭಾಂಗಣದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಬೆಳಗ್ಗೆ 10ಕ್ಕೆ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡುವರು.

ಸಮ್ಮೇಳನದಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನೇತಾರರು ಪಾಲ್ಗೊಳ್ಳುವರು. ವಿಶ್ವಕರ್ಮ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೆರಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಎನ್‌ವಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಸೀತಾರಾಮ್ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂಘಟನೆ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವನ್ ಕೊಳತ್ತೂರ್, ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ರಾಘವನ್ ದೊಡ್ಡುವಯಲ್, ರಾಷ್ಟ್ರೀಯ ಸಮಿತಿ ಸದಸ್ಯೆ ವಸಂತಿ ಜೆ.ಆಚಾರ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net