

ದಾವಣಗೆರೆ: ಶ್ರೀ ವಿಶ್ವಕರ್ಮ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಲಾಗಿತ್ತು. ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ, ಉಪಕಾರ್ಯದರ್ಶಿ ಆನಂದ್, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಸಾಪುರದ ನಾಗೇಂದ್ರಚಾರ್, ಕಾರ್ಯದರ್ಶಿ ಬಿ.ಬಿ. ಶಿವಾನಂದ, ವಿ.ಎಂ. ಕೊಟ್ರೇಶ್, ಖಜಾಂಚಿ ಬೇತೂರು ವಿಜಯಕುಮಾರ್, ನಿರ್ದೇಶಕರಾದ ಬೇತೂರು ಮಂಜುನಾಥ್, ಬಿ. ಸಿದ್ದಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಇದ್ದರು.