ಆಧುನಿಕ ಭಾರತದ ಶಿಲ್ಪಿಗಳು : ಶಾಸಕ ಉಮಾನಾಥ ಕೋಟ್ಯಾನ್ ಬಣ್ಣನೆ

New Project (16)
Published on

ಮೂಲ್ಕಿ: ತಾಲೂಕು ಆಡಳಿತ, ತಾಪಂ ಮತ್ತು ಮೂಲ್ಕಿ ನಪಂ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ನಗರ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯಿತು.

ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಸಮುದಾಯದವರು ಆಧುನಿಕ ಭಾರತದ ಶಿಲ್ಪಿಗಳು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶ್ವಕರ್ಮರಿಗಾಗಿ ಅನೇಕ ಯೋಜನೆ ರೂಪಿಸಿ ಗೌರವ ಕೊಟ್ಟಿದೆ ಎಂದರು

ಮೂಲ್ಕಿ ನಪಂ ಅಧ್ಯಕ್ಷ ಸತೀಶ್ ಅಂಚನ್, ತಾಲೂಕು ಉಪತಹಸೀಲ್ದಾರ್ ದಿಲೀಪ್ ರೋಡ್ಕರ್, ನ.ಪಂ. ಮುಖ್ಯಾಧಿಕಾರಿ ಮಧುಕರ್, ಮೂಲ್ಕಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಜಗದೀಶ್ ಆಚಾರ್ಯ, ಮಹಿಳಾ ಅಧ್ಯಕ್ಷೆ ಶಶಿಕಲಾ ಆಚಾರ್ಯ, ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್ ಸ್ವಾಗತಿಸಿದರು. ಗ್ರಾಮ ಆಡಳಿತಾಧಿಕಾರಿ ನಿಶ್ಮಿತಾ ಕುಮಾರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net