ವಿಶ್ವಕರ್ಮ ಜಯಂತಿ 17ರಂದು

9 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೆ. 17ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ಸೇರಿ ವಿಜೃಂಭಣೆಯಿಂದ ಆಚರಿಸೋಣ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net