ಚಿತ್ರದುರ್ಗ: ಸೆಪ್ಟೆಂಬರ್ 6ರಂದು ವಿಶ್ವಕರ್ಮ ಜಯಂತಿ ಆಯೋಜಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ.2ರಂದು ಬೆಳಗ್ಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ..ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಸಲಹೆ-ಸೂಚನೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.