ಸೆ.17ರಂದು ವಿಶ್ವಕರ್ಮ ಜಯಂತಿ ಅಚರಣೆ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿಕೆ

Adc Meeting
Published on

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.17ರಂದು ಬೆಳಗ್ಗೆ 11 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಕಲಾಮಂದಿರದವರೆಗೆ ಮೆರವಣಿಗೆ ನಡೆಸಲಾಗುವುದು. ಈ ವೇಳೆ ವಿವಿಧ ಕಲಾ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಲಿದೆ. ಅಂತೆಯೇ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ರಾಮಕೃಷ್ಣ ಸೇವಾಶ್ರಮದ ನಾಗನಂದಸ್ವಾಮಿಜಿ ಅವರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ತಿರುಮಲಾಚಾರಿ, ಡಾ.ಯೋಗಚಾರಿ, ಸುದರ್ಶನ್, ಸತೀಶ್, ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net