

ಬಂಟ್ವಾಳ: ವಿಶ್ವಕರ್ಮರು ಕುಲಕಸುಬುಗಳ ಮೂಲಕ ಸಮಾಜಕ್ಕೆ ಬೆಳಕಾದವರು. ಸರ್ಕಾರ ಕೂಡ ವಿಶ್ವಕರ್ಮರ ಹೆಸರಿನಲ್ಲಿ ದೊಡ್ಡ ಯೋಜನೆಯನ್ನು ಜಾರಿಗೆ ತಂದಿರುವುದು ವಿಶ್ವಕರ್ಮರಿಗೆ ಹೆಮ್ಮೆಯ ಸಂಗತಿ ಎಂದು ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಹೇಳಿದರು.
ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ನಡೆದ ವಿಶ್ವಕರ್ಮ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರ ಎಂದರು.
ಮಂಗಳೂರು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಶಿವಪ್ರಸನ್ನ ಆಚಾರ್ಯ ಮಾತನಾಡಿದರು. ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಕಿರಿಯ ಇಂಜಿನಿಯರ್ ಕೃಷ್ಣ ಪತ್ತಾರ್, ಆನೆಗುಂದಿ ಮಹಾಸಂಸ್ಥಾನದ ಗುರು ಸೇವಾ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷ ಯುವರಾಜ ಆಚಾರ್ಯ, ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ವಿದ್ಯಾರತ್ನಾಕರ ರೈ, ಧಾರ್ಮಿಕ ಕಾರ್ಯದರ್ಶಿ ಕಳ್ಳಿಗೆ ನಾರಾಯಣ ಆಚಾರ್ಯ ಉಪಸ್ಥಿತರಿದ್ದರು.
ಕಾಷ್ಠಶಿಲ್ಪಿ ಸಹೋದರರಾದ ಹರೀಶ್ ಆಚಾರ್ಯ ಹಾಗೂ ಕುಮಾರಸ್ವಾಮಿ ಶರ್ಮ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ ಸ್ವಾಗತಿಸಿದರು. ಕಾರ್ಯದರ್ಶಿ ಸಂದೀಪ್ ಬಿ.ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ಆಚಾರ್ಯ ವಂದಿಸಿದರು. ಪದಾಧಿಕಾರಿಗಳಾದ ಜಯಪ್ರಕಾಶ ಆಚಾರ್ಯ, ಜಯಚಂದ್ರ ಆಚಾರ್ಯ, ಅಶೋಕ್ ಆಚಾರ್ಯ ಸಹಕರಿಸಿದರು.