ಕುಲಕಸುಬಿನೊಂದಿಗೆ ಶೈಕ್ಷಣಿಕ ಚಟುವಟಿಕೆಗೆ ಒತ್ತು

sabhe
Published on

ಬೈಂದೂರು: ವಿಶ್ವಕರ್ಮ ಸಮಾಜದವರು ಕುಲ ಕಸುಬಿನೊಂದಿಗೆ ತಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಹೆಚ್ಚು ಒತ್ತು ಕೊಟ್ಟು ಅವರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂದು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯ ಹೇಳಿದರು.

ರೋಟರಿ ಸಮೂದಾಯ ಭವನದಲ್ಲಿ ಬೈಂದೂರು ವಿಶ್ವಕರ್ಮ ಸಮಾಜ ಸೇವಾ ಸಂಘ 15ನೇ ವಾರ್ಷಿಕೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಿಶ್ವಕರ್ಮ ಸಮಾಜ ಸೇವಾ ಸಂಘ ಅಧ್ಯಕ್ಷ ನಾರಾಯಣ ಆಚಾರ್ಯ ಮಾವಡ ಅಧ್ಯಕ್ಷತೆ ವಹಿಸಿದ್ದರು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ ಉದ್ಘಾಟಿಸಿದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಗೋಳಿಹೊಳೆ ಪ್ರಶಾಂತ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಗುರುರಾಜ್ ಗಂಟಿಹೊಳೆ, ಲಾವಣ್ಯ ಹಿರಿಯ ಕಲಾವಿದ ಬಿ.ಗಣೇಶ ಕಾರಂತ, ಮುರ್ಡೇಶ್ವರ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ವಿಭಾಗೀಯ ಮುಖ್ಯಸ್ಥ ದಿನೇಶ ಆಚಾರ್ಯ ಚೇಂಪಿ ಇದ್ದರು. ಮಹೇಶ ಆಚಾರ್ಯ ಉಪ್ಪುಂದ ಪ್ರಾರ್ಥಿಸಿದರು. ಕಾರ್ಯದರ್ಶಿ ಬಿ. ನಾಗರಾಜ ಆಚಾರ್ಯ ಸ್ವಾಗತಿಸಿದರು. ಲಕ್ಷ್ಮಣ ಆಚಾರ್ಯ ನಾಯ್ಕನಕಟ್ಟೆ ವಂದಿಸಿದರು. ವಿಶ್ವನಾಥ ಆಚಾರ್ಯ ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net