ಆ.27ರಂದು ಮೈಸೂರಿನಲ್ಲಿ ಪ್ರತಿಭಾ ಪುರಸ್ಕಾರ: ವಿಶ್ವಕರ್ಮ ಸಮಾಜಸೇವಾ ಟ್ರಸ್ಟ್ ಮಾಜಿ ಜಿಲ್ಲಾಧ್ಯಕ್ಷ ಎಚ್.ಪಿ.ಸತೀಶ್ ಮಾಹಿತಿ

3
Published on

ಮಂಡ್ಯ: ವಿಶ್ವಕರ್ಮ ಸೇವಾ ಟಸ್ಟ್ ವಾರ್ಷಿಕೋತ್ಸವ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.27ರಂದು ಮಧ್ಯಾಹ್ನ 12ಗಂಟೆಗೆ ಮೈಸೂರು ಮೆಡಿಕಲ್ ಕಾಲೇಜಿನ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ಮಾಜಿ ಜಿಲ್ಲಾಧ್ಯಕ್ಷ ಎಚ್.ಪಿ.ಸತೀಶ್ ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನು ತುಮಕೂರಿನ ನಿಟ್ಟರಹಳ್ಳಿಯ ವಿಶ್ವಕರ್ಮ ಮಹಾಸಂಸ್ಥಾನದ ನೀಲಕಂಠಚಾರ್ಯ ಮಹಾಸ್ವಾಮಿ ವಹಿಸುತ್ತಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವಿಶೇಷ ಆಹ್ವಾನಿತರಾಗಿ ಸರಿಗಮಪ ಕಾರ್ಯಕ್ರಮದ ವಿಜೇತೆ ಪ್ರಗತಿ ಬಡಿಗೇರ್ ಮತ್ತು ಮಹಾಭಾರತ ಖ್ಯಾತಿಯ ಹಾಸ್ಯನಟ ವಿನೋದ್ ಗೊಬ್ಬರಗಾಲ ಆಗಮಿಸುವರು.ಆದ್ದರಿಂದ ಈ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ವಿಶ್ವಕರ್ಮ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

2022-23ನೇ ಸಾಲಿನ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದರು.

ಜಿಲ್ಲಾಧ್ಯಕ್ಷ ವಿ.ಪ್ರಕಾಶ್, ಉಪಾಧ್ಯಕ್ಷ ದೇವರಾಜಚಾರ್, ನಿರ್ದೇಶಕ ಎಂ.ಎನ್.ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net