ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ; ಎಎಸ್‌ಪಿ ರಾಮನಗೌಡ ಹಟ್ಟಿ

VISHWAKARMA JAYANTI
ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ವಿಶ್ವಕರ್ಮ ಜಯಂತಿಯನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಉದ್ಘಾಟಿಸಿದರು. ರಾಮಣ್ಣ ಅಥಣಿ, ಐ.ಎಚ್. ತುಂಬಗಿ, ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು.

ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯದ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವಪೀಳಿಗೆ ಅನುಸರಿಸಬೇಕು ಎಂದು ಹೇಳಿದರು.

ಪೂಜ್ಯ ಮಹೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ರಾವಸಾಬ ಬಡಿಗೇರ ಉಪನ್ಯಾಸ ನೀಡಿದರು.

ಜಿಪಂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಗ್ರೇಡ್- 2 ತಹಸೀಲ್ದಾರ್ ಐ.ಎಚ್. ತುಂಬಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ದೇವೆಂದ್ರ ಮಿರೇಕರ್ ಮತ್ತಿತರರಿದ್ದರು.

ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಎಚ್.ಮಮದಾಪೂರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ಲ ಹನುಮಂತರಾಯ ರಂಗಮಂದಿರ ತಲುಪಿ ಸಮಾವೇಶವಾಗಿ ಪರಿವರ್ತನೆಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net