ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗಣ್ಯರು ವಿಶ್ವ ಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ರೇಖಾ, ರಾಜೇಂದ್ರ, ಸಿದ್ದಪ್ಪಾಜಿ, ಬಸವರಾಜು, ಗುರು ಶಾಂತಪ್ಪ ಬೆಳ್ಳುಂಗುಡಿ ಇದ್ದರು.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗಣ್ಯರು ವಿಶ್ವ ಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ರೇಖಾ, ರಾಜೇಂದ್ರ, ಸಿದ್ದಪ್ಪಾಜಿ, ಬಸವರಾಜು, ಗುರು ಶಾಂತಪ್ಪ ಬೆಳ್ಳುಂಗುಡಿ ಇದ್ದರು.
Published on

ಕೊಳ್ಳೇಗಾಲ: ಸರ್ಕಾರ ಮಹನೀಯರ ಜಯಂತಿ ಆಚರಿಸುವ ಮೂಲಕ ಅವರ ತತ್ವ-ಆದರ್ಶಗಳನ್ನು ನಾಡಿಗೆ ತಿಳಿಸುತ್ತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದಲ್ಲಿ ಮಾತನಾಡಿ, ವಿಶ್ವಕರ್ಮರ ಕೊಡುಗೆ ಈ ನಾಡಿಗೆ ಅಪಾರವಾಗಿದೆ. ಲೋಕವನ್ನು ವೈಭವೀಕರಿಸುವ, ಸಾಂಸ್ಕೃತಿಕ ಪರಂಪರೆ ಕಲೆ ಮತ್ತು ವಾಸ್ತು ಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರು ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ ಮುಳ್ಳೂರು ಸಿದ್ದಪ್ಪಾಜಿ ಮಾತನಾಡಿದರು. ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ರೇಖಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿದ್ದಪ್ಪಾಜಿ, ತಹಸೀಲ್ದಾರ್ ಬಸವರಾಜು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಗುಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ನಗರಸಭೆ ಪೌರಯುಕ್ತ ನಟರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net