ವಿಶ್ವಕರ್ಮರ ಶಿಲ್ಪಕಲೆ ಅಮರ

2
ದೊಡ್ಡಬಳ್ಳಾಪುರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಧೀರಜ್ ಮುನಿರಾಜು, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮುಖಂಡರಾದ ಚಂದ್ರಶೇಖರ್, ನಾಗರತ್ನಾ ಮತ್ತಿತರರು ಇದ್ದರು.
Published on

ಅಮರಶಿಲ್ಪಿ ಜಕಣಾಚಾರಿ ದಿನಾಚರಣೆಯಲ್ಲಿ ಮಾಹಿತಿ

ದೊಡ್ಡಬಳ್ಳಾಪುರ: ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲಕ್ಕೆ ಅಮರಶಿಲ್ಪಿ ಜಕಣಾಚಾರಿ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ದಿನಾಚರಣೆಯಲ್ಲಿ ಮಾತನಾಡಿದರು.

ಭಾರತ ಸೇರಿ ವಿಶ್ವದ ವಿವಿಧ ಕಡೆ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಕೊಡುಗೆಗೆ ಇವುಗಳೇ ಸಾಕ್ಷಿ. ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ ವಿಶ್ವಕರ್ಮರ ಪ್ರಸ್ತುತತೆಯನ್ನು ಬಿಂಬಿಸುತ್ತಿದೆ. ನಶಿಸಿಹೋಗುತ್ತಿರುವ ವಿಶ್ವಕರ್ಮರ ಕುಲಕಸುಬುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿ, ಮುಂದುವರಿಸಲು ಎಲ್ಲರೂ ಪ್ರಯತ್ನಿಸಬೇಕು. ಸೃಷ್ಟಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದೆ. ಪ್ರಪಂಚದ ಎಲ್ಲ ವಿದ್ಯೆಗಳ ಮೂಲವಾಗಿರುವ ಜಕಣಾಚಾರಿ ಅವರನ್ನು ಜಗತ್ತಿನ ಮೊದಲ ಮುಖ್ಯ ಇಂಜಿನಿಯರ್ ಎನ್ನಬಹುದು. ವಿಶ್ವಕರ್ಮರ ಶಿಲ್ಪಕಲೆ ಅಮರವಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net