ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ, ಡಿ.ಕೆ.ಶಿವಕುವಾರ್ ಬಂಡೆ ಆಗಿದ್ದರೆ ಶಾಮನೂರು ಶಿವಶಂಕರಪ್ಪರನ್ನು ಪಕ್ಷದಿಂದ ಉಚ್ಚಾಟಿಸಲಿ: ಎಚ್.ವಿಶ್ವನಾಥ್

mysore
Published on

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಬಂಡೆ ಆಗಿದ್ದರೆ ಕೂಡಲೇ ಶಾಮನೂರು ಶಿವಶಂಕರಪ್ಪ ಅವರನ್ನು ಉಚ್ಛಾಟಿಸಬೇಕು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ ಶಾಸಕರಾಗಿದ್ದಾರೆ. ಅವರು ಕಾಂಗ್ರೆಸ್‌ನಿಂದ ಹಲವಾರು ನೆರವನ್ನು ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಆಶೀರ್ವಾದಿಂದ ಶಾಮನೂರು ಶಿವಶಂಕರಪ್ಪ ರಾಜಕೀಯವಾಗಿ ಬೆಳೆದರು. ಅದರೆ, ಅವರಿಗೆ ಕಾಂಗ್ರೆಸ್ ಪಕ್ಷ ಹಾಗೂ ಅರಸರ ಬಗ್ಗೆ ಕಿಂಚಿತ್ತೂ ಕೃತಜ್ಞತೆ ಇಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಶಾಮನೂರು ಶಿವಶಂಕರಪ್ಪ ಅವರ ಗೆಲುವಿನಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕಿಂತ ಇತರೆ ಸಮುದಾಯಗಳು ನಿರ್ಣಾಯಕ ಪಾತ್ರ ವಹಿಸಿವೆ. ಇತರೆ ಸಮುದಾಯದವರು ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತವನ್ನು ಚಲಾಯಿಸಿದ್ದಾರೆ. ಆದರೆ, ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಜಾತಿ ಕಾರಣಕ್ಕೆ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸುವಂತೆ ಕರೆ ನೀಡಿರುವುದು ಸರಿಯಲ್ಲ. ಇವರನ್ನು ಪಕ್ಷದಿಂದ ಉಚ್ಚಾಟಿಸುವುದು ಉತ್ತಮ. ಶಾಮನೂರು ಶಿವಶಂಕರಪ್ಪ ಇಲ್ಲದಿದ್ದರೆ ಕಾಂಗ್ರೆಸ್ ನಡೆಂುುವುದಿಲ್ಲವೇ ಎಂದು ಪ್ರಶ್ನಿಸಿದರು.

ಕಾಂತರಾಜ ಆಂೋಗ ರಾಜ್ಯದ ಎಲ್ಲ ಸಮುದಾಯಗಳ ಆರ್ಥಿಕ, ಸಾವಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಂ್ಯು ಸ್ವೀಕರಿಸಬೇಕು. ವರದಿಯಲ್ಲಿ ಏನಿದೆ ಎಂಬುದು ವರದಿ ಬಿಡುಗಡೆಯಾದ ನಂತರವೇ ತಿಳಿಯುವುದು. ಆದರೆ, ಬಿಡುಗಡೆಗೂ ಮುನ್ನವೇ ವಿರೋಧಿಸುವುದು ಸರಿಯಲ್ಲ. ವರದಿಯನ್ನು ವಿರೋಧಿಸುವ ಸ್ವಾಮೀಜಿಗಳಿಗಂತೂ ಸಂವಿಧಾನದ ಅರಿವೇ ಇಲ್ಲ. ಹಾಗಾಗಿ ಏನೇ ವಿರೋಧವಿದ್ದರೂ ವರದಿ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಪ್ರತಿಮೆ ಸ್ಥಾಪನೆಗೆ ಸರ್ಕಾರ ಮುಂದಾಗಿ 92 ಲಕ್ಷ ರೂ. ಹಣ ಬಿಡುಗಡೆಗೊಳಿಸಿರುವುದು ಸ್ವಾಗತಾರ್ಹ. ದೇವರಾಜ ಅರಸು ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ತಳಸಮುದಾಯಗಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಕರ್ಪೂರಿ ಠಾಕೂರ್ ಅವರಂತೆಂೆುೀ ಕೇಂದ್ರ ಸರ್ಕಾರ ದೇವರಾಜ ಅರಸು ಅವರಿಗೂ ಭಾರತ ರತ್ನ ಪ್ರಶಸ್ತಿ ೋಷಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಹೋರಾಟ ಸಮಿತಿ ಗೌರವ ಅಧ್ಯಕ್ಷ ಎಂ.ಚಂದ್ರಶೇಖರ್, ಅಧ್ಯಕ್ಷ ಜಾಕೀರ್ ಹುಸೇನ್, ಕಾರ್ಯದರ್ಶಿಗಳಾದ ಡೈರಿ ವೆಂಕಟೇಶ್, ಡಾ.ವೈ.ಡಿ.ರಾಜಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net