ನಿಮ್ಮಪ್ಪನ ಜೈಲಿಗೆ ಹಾಕಿಸಿದ್ದೇ ನೀನು: ಬಿ.ವೈ.ವಿಜಯೇಂದ್ರ ವಿರುದ್ಧ ವಿಶ್ವನಾಥ್ ಕಿಡಿ

mysore
Published on

ಮೈಸೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ ದೇಗುಲಗಳ ಹುಂಡಿ ಹಣಕ್ಕೂ ಸರ್ಕಾರ ಕೈ ಹಾಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ವಿಶ್ವನಾಥ್, ಬಿಜೆಪಿ ಸರ್ಕಾರದ ಅವಧಿಯಲ್ಲೇನು ರಾಜ್ಯದ ಖಜಾನೆ ಭರ್ತಿಯಾಗಿತ್ತಾ? ನಿಮ್ಮಪ್ಪನನ್ನು ಜೈಲಿಗೆ ಹಾಕಿಸಿದ್ದೇ ನೀನು. ನೀವೇನು ಸತ್ಯವಂತರಾ? ವಾಗ್ದಾಳಿ ನಡೆಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಮುಂಬರುವ ಲೋಕಸಭಾ ಚುನಾಣೆಗೆ ದಿಕ್ಸೂಚಿ. ರಾಜ್ಯದ ಜನರು ಮೈತ್ರಿಯ ವಿರುದ್ಧ ಇದ್ದಾರೆ ಎಂಬುದು ಚುನಾವಣಾ ಫಲಿತಾಂಶದ ಮೂಲಕ ಗೊತ್ತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಜನರು ತಿರಸ್ಕರಿಸಿದ್ದರು. ಪರಿಣಾಮ, ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟಕ್ಕೆ ಲಾಭವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದೇನೆ. ಈ ಹಿಂದೆ ಸಂಸದನಾಗಿ, ಶಾಸಕನಾಗಿ, ಸಚಿವನಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಆಕಾಂಕ್ಷಿ ಯಾಕಾಗಬಾರದು ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net