5 ನೇ ಹಣಕಾಸು ಆಯೋಗದ ಅಧ್ಯಕ್ಷರ ಭೇಟಿ

visit
Published on

ಮಡಿಕೇರಿ:

ವಿರಾಜಪೇಟೆ ತಾಲೂಕಿನ ಕೆ.ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ.ನಾರಾಯಣಸ್ವಾಮಿ ಮಂಗಳವಾರ ಭೇಟಿ ನೀಡಿದ್ದರು. ಈ ವೇಳೆ ಚುನಾಯಿತ ಸದಸ್ಯರುಗಳ ಸಮಾಲೋಚನೆ ಸಭೆಯ ಅಧಕ್ಷತೆ ವಹಿಸಿ ಮಾತನಾಡಿ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಶ್ರಮಿಸಬೇಕು. ಕೆ.ಬಾಡಗ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾಡಿಗಳಿದ್ದು, ಇಲ್ಲಿನ ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಕ್ರಮವಹಿಸಬೇಕು ಎಂದರು.

ಕೆ.ಬಾಡಗ ಗ್ರಾ.ಪಂ.ಅಧ್ಯಕ್ಷ ರಿತೇಶ್ ಬಿದ್ದಪ್ಪ ಮಾತನಾಡಿ ತಮ್ಮ ಗ್ರಾ.ಪಂ. ಚಿಕ್ಕ ಗ್ರಾಮ ಪಂಚಾಯಿತಿಯಾದರೂ ಸಹ ಸರ್ಕಾರದ ವಿವಿಧ ಯೋಜನೆಗಳ ಅನುದಾನ ಉತ್ತಮವಾಗಿ ಬಳಸಿಕೊಂಡು ಅಭಿವೃದ್ಧಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಹಾಯಕ ನಿರ್ದೇಶಕರಾದ (ಗ್ರಾ.ಉ) ಎಂ.ಡಿ. ಶ್ರೀನಿವಾಸ್ ಮಾತನಾಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತೋಡು ಅಭಿವೃದ್ಧಿ, ಕೆರೆ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ ಹಾಗೂ ಹಲವು ವೈಯಕ್ತಿಕ ಸೌಲಭ್ಯಗಳನ್ನು ನೀಡುವಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿ, ವಿರಾಜಪೇಟೆ ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳನ್ನು ಸೃಜಿಸಿದ ಗ್ರಾಮ ಪಂಚಾಯಿತಿಯಾಗಿದ್ದು, 2024-25 ನೇ ಸಾಲಿನ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡುವ ಉತ್ತಮ ಗ್ರಾಮ ಪಂಚಾಯಿತಿ ರಾಜ್ಯ ಪ್ರಶಸ್ತಿ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಲಭಿಸಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಸರ್ಕಾರದಿಂದ ಬಿಡುಗಡೆಯಾದ 15 ನೇ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ವಸತಿ ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು.

ನಾಲ್ಕೇರಿ ಗ್ರಾ.ಪಂ.ಅಧ್ಯಕ್ಷ ಸೋಮಯ್ಯ, ರಾಜ್ಯ 5 ನೇ ಹಣಕಾಸು ಆಯೋಗದ ಸದಸ್ಯರಾದ ಆರ್.ಎಸ್. ಪೋಂಡೆ, ಮಹಮ್ಮದ್ ಸನಾವುಲ್ಲಾ, ಕೆಂಪೇಗೌಡ, ಕೆ.ಯಾಲಕ್ಕಿಗೌಡ, ಸುಪ್ರಸನ್ನ, ತಾ.ಪಂ.ಇ.ಒ. ಕೆ.ಸಿ.ಅಪ್ಪಣ್ಣ, ಸಹಾಯಕ ನಿರ್ದೇಶಕರುಗಳಾದ ಎಂ.ಡಿ. ಶ್ರೀನಿವಾಸ್, ಹೇಮಂತ್ ಕುಮಾರ್, ಪಿ.ವಿ.ಶ್ರೀನಿವಾಸ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net