ನದಿ ಪಾತ್ರದ ಸೇನಾ ಅಧಿಕಾರಿಗಳ ಭೇಟಿ

raichur
raichur
Published on

ರಾಯಚೂರು ಭಾರತೀಯ ಸೇನೆಯ ಅಧಿಕಾರಿ ಮೇಜರ್ ಬಸವ ಪ್ರಭು ಹಾಗೂ ಸಂಜೀವ್ ಸಾಧುನವರ್ ನೇತೃತ್ವದ ತಂಡವು ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಂಡವು ಈ ಕಾರ್ಯಕ್ರಮ ನಡೆಸಿತು.

ತಾಲೂಕಿನ ಆತ್ಮರು, ಕುರ್ವಕರ್ದಾ, ಕುರ್ವಕಲಾ, ದೊಂಗರಾಂಪುರ, ಕಾಡೂರು ಹಾಗೂ ಗುರ್ಜಾಪೂರ, ಗುರ್ಜಾಪೂರ ಬ್ರಿಡ್ಜ್ ಕಮ್ ಬ್ಯಾರೇಜ ಹಾಗೂ ದೇವದುರ್ಗ ತಾಲೂಕಿನ ಅಪ್ರಾಳ, ಬಸವಂತಪುರ, ಹಿರೇರಾಯಕುಂಪಿ, ಚಿಕ್ಕರಾಯಕುಂಪಿ, ಗೂಗಲ್, ಗೂಗಲ್ ಬ್ರಿಡ್ಜ್ ಕಮ್ ಬ್ಯಾರೇಜ್ ಸೇರಿದಂತೆ ಶಕ್ತಿನಗರದ ಹೆಲಿಪ್ಯಾಡ್ ಈ ಎಲ್ಲಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಯಚೂರು ಹಾಗೂ ದೇವದುರ್ಗ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ಪರಿಣಿತರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net