ಕುಂಭಾಸಿ ಆನೆಗುಡ್ಡೆ ದೇವಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

kot shrinivas
ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್ ಆಡಳಿತ ಮಂಡಳಿ ಸದಸ್ಯರು ಮತ್ತಿತರರು ಇದ್ದರು
Published on

ಕೋಟ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಕುಟುಂಬ ಸಮೇತರಾಗಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇವಳ ಆಡಳಿತ ಮೊಕ್ತೇಸರ ಕೆ. ರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ.ಸೂರ್ಯನಾರಾಯಣ ಉಪಾಧ್ಯಾಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪತ್ನಿ ಶಾಂತಾ ಅವರನ್ನು ದೇವಾಯಲಕ್ಕೆ ಬರಮಾಡಿಕೊಂಡು ಸನ್ಮಾನಿಸಿ ಶ್ರೀದೇವರ ಪ್ರಸಾದ ನೀಡಿದರು.

ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್ ಆಡಳಿತ ಮಂಡಳಿ ಸದಸ್ಯರು ಅರ್ಚಕರು, ದೇವಳದ ಸಿಬ್ಬಂದಿ ಮತ್ತು ಬಿಜೆಪಿ ಕಾರ್ಯಕರ್ತರುಗಳಾದ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಸುಧೀರ್ ಕೆ.ಎಸ್., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಮಂಡಲ ಉಪಾಧ್ಯಕ್ಷರಾದ ರೂಪಾ ಪೈ, ಶರತ್ ಹೆಗ್ಡೆ ಶಾನಾಡಿ, ಕೆದೂರು ಗ್ರಾಪಂ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಕೆದೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಕುಂಭಾಸಿ ಗ್ರಾಪಂ ಮಾಜಿ ಅಧ್ಯಕ್ಷೆ ಶ್ವೇತಾ ಎಸ್.ಆರ್., ಕುಂಭಾಸಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮಂಜುನಾಥ ಕಾಮತ್, ಪುಷ್ಪಾ ಶೇಟ್, ಗುಣರತ್ನ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net