ತಾಲ್ಲೂಕುವಾರು ಲೋಕಾಯುಕ್ತ ಅಧಿಕಾರಿಗಳ ಭೇಟಿ

MEETING LOGI
Published on

ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸೆ.13 ರಂದು ಮೈಸೂರು ಜಿಲ್ಲಾ ತಾಲೂಕು ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ಕ್ರಮಬದ್ಧವಾಗಿ ಭರ್ತಿ ಮಾಡಿದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಕೆ.ಆರ್ ನಗರ ತಾಲೂಕಿನ ತಾಲೂಕು ಕಚೇರಿ ಸಭಾಂಗಣ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರವಾಸಿ ಮಂದಿರ ಹಾಗೂ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲೂಕಿನ ತಾಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net