ನೂತನ ಯುವ ಕಾಂಗ್ರೆಸ್ ಪದಾಧಿಕಾರಿಗಳ ಭೇಟಿ

Gokarna
Published on

ಗೋಕರ್ಣ: ಹತ್ತಿರದ ಮೊರಬಾದಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಅವರನ್ನು ನೂತನವಾಗಿ ಆಯ್ಕೆಯಾದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಮೋದ್ ಸಿರ್ಸಿಕರ್ ನೇತೃತ್ವದಲ್ಲಿ ವಿವಿಧ ಯುವ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಭೇಟಿಯಾಗಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದರು.

ಈ ವೇಳೆ ಮಾತನಾಡಿದ ನಿವೇದಿತ್, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕ(ಎನ್‌ಎಸ್‌ಯುಐ)ದಿಂದ ತರಬೇತು ಹೊಂದಿರುವ ಅಮೋದ್ ಅವರು ಜಿಲ್ಲೆಯಲ್ಲಿ ನೂತನ ತಂಡದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಬಲವಾಗಿ ಸಂಘಟಿಸಿ ತಮಗಿತ್ತ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ಭರವಸೆಯಿದೆ ಎಂದರು.

ಇವರ ಸಂಗಡ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಪದಾಧಿಕಾರಿಗಳು ಕಠಿಣ ಪರಿಶ್ರಮಿ ಯುವಕರಾಗಿದ್ದು, ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಸರ್ವತೋಮುಖವಾಗಿ ಬೆಳೆಯುವ ವಿಶ್ವಾಸವಿದೆ ಎಂದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ವೈಭವ ನಾಯ್ಕ, ಸಂದೇಶ, ನವೀನ್, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗವತ್, ಜಿಪಂ ಮಾಜಿ ಸದಸ್ಯ ಪ್ರದೀಪ ನಾಯಕ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net