ಮಳೆ ಹಾನಿ ಪ್ರದೇಶಗಳಿಗೆ ಭೇಟಿ

ಮಳೆ ಹಾನಿ ಪ್ರದೇಶಗಳಿಗೆ ಭೇಟಿ
Published on

ಸಿದ್ದಾಪುರ: ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ.ಮಂತರ್ ಗೌಡ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೆಲ್ಯಹುದಿಕೇರಿ ಗ್ರಾಮದ ಬರಡಿ, ಬೆಟ್ಟದಕಾಡು, ಕುಂಬಾರ ಗುಂಡಿ ಗ್ರಾಮದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿ ಸ್ಥಳೀಯ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದರು.

ರಸ್ತೆ ದುರಸ್ತಿಗಾಗಿ ಬರಡಿ ಹಾಗೂ ಕುಂಬಾರ ಗುಂಡಿ ಗ್ರಾಮಸ್ಥರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ, ಸದಸ್ಯ ಹಕೀಮ್, ಸಾಬು ವರ್ಗಿಸ್, ಅಶೋಕ್, ಅನಿಫಾ, ಮುಸ್ತಫ, ಶಫಿಯ, ಡಿಸಿಸಿ ಸದಸ್ಯ ಕೆ.ಎಂ.ಬಶೀರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಭಾವ, ಕಾಂಗ್ರೆಸ್ ಮುಖಂಡ ಸಂಶು, ಅಬ್ದುಲ್ಲಾ, ಸಿ.ಎಂ.ಹಂಸ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net