ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ

Visit to the new building of Kodagu Institute of Medical Sciences
Published on

ಮಡಿಕೇರಿ:

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಆಸ್ಪತ್ರೆಗೆ ತೆರಳಿ ತುರ್ತು ಚಿಕಿತ್ಸಾ ವಿಭಾಗ, ರಕ್ತನಿಧಿ ಕೇಂದ್ರ, ಹೊಸದಾಗಿ ಅಳವಡಿಸಿರುವ ಎಂಆರ್‌ಐ ಸ್ಕಾö್ಯನಿಂಗ್ ಕೇಂದ್ರ ಮತ್ತಿತರ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ನಂತರ ಮಾತನಾಡಿದ ಸಚಿವರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 300 ಹಾಸಿಗೆ ಆಸ್ಪತ್ರೆಯಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ 55 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಬಿಡುಗಡೆಗೆ ಪ್ರಯತ್ನಿಸಲಾಗುವುದು. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಸೇವೆ ಒದಗಿಸಲಾಗುತ್ತಿದೆ.

ಈಗಾಗಲೇ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕಾö್ಯನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿನ ಖಾಲಿ ಇರುವ ವೈದ್ಯರ ಹುದ್ದೆಗಳು, ತಜ್ಞರು ಹಾಗೂ ಇತರರ ನೇಮಕ ಸಂಬAಧಿಸಿದAತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಳಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತ ರಾಥೋಡ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಡಾ.ರೂಪೇಶ್ ಗೋಪಾಲ್, ಡಾ.ಲೋಕೇಶ್, ವಿವಿಧ ವಿಭಾಗದ ಮುಖ್ಯಸ್ಥರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net