

ಭದ್ರಾವತಿ: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್‌ಎಲ್) 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿವೃತ್ತ ಕಾರ್ಮಿಕ, ಹಿರಿಯ ನಟ ದೊಡ್ಡಣ ನೇತೃತ್ವದಲ್ಲಿ ಶತಮಾನೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು ಮೊದಲ ಹಂತದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಚಿವರಿಗೆ ಆಮಂತ್ರಣ ಪತ್ರ ವಿತರಿಸಲಾಯಿತು.
ದೊಡ್ಡಣ್ಣ ನೇತೃತ್ವದ ತಂಡ ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರೊಡಗೂಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ, ನ.4 ಹಾಗೂ 5ರಂದು ಭದ್ರಾವತಿಯ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ.