ವಿಶ್ವೇಶ್ವರಯ್ಯ ಅವರು ಬಹುಮುಖ ಪ್ರತಿಭೆ

17 ckm 2
ಚಿಕ್ಕಮಗಳೂರು ಮಧುವನ ಲೇಔಟ್‌ನಲ್ಲಿರುವ ಲಯನ್ಸ್ ಸೇವಾ ಭವನದಲ್ಲಿ ಲಯನ್ಸ್ ಕ್ಲಬ್‌ನಿಂದ ಆಯೋಜಿಸಲಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಅಂಗವಾಗಿ ಇಂಜಿನಿರ‍್ಸ್ ಡೇ ಹಾಗೂ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಇಂಜಿನಿಯರ್ ಎಂ.ಎ.ನಾಗೇAದ್ರ ಮಾತನಾಡಿದರು. ಎಂ.ತ್ರಿಪುರ ಮಹೇಶ್ವರ, ಕೆ. ಪುಷ್ಪರಾಜ್, ಸಿ.ಎನ್.ಕುಮಾರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸರ್.ಎಂ.ವಿಶ್ವೇಶ್ವರಯ್ಯ ಅವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರೂ ಅವರದು ಬಹುಮುಖ ವ್ಯಕ್ತಿತ್ವ. ಅವರು ಒಂದು ವ್ಯಕ್ತಿಯಲ್ಲ. ಬದಲಿಗೆ ಒಂದು ಶಕ್ತಿಯಾಗಿದ್ದರು. ಇಂಜಿನಿಯರಿAಗ್ ಕ್ಷೇತ್ರ ಸೇರಿದಂತೆ ಶೈಕ್ಷಣಿಕ, ಕೈಗಾರಿಕಾ ಮತ್ತು ನೀರಾವರಿ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರದ್ದು ಕ್ರಿಯಾಶೀಲ ವ್ಯಕ್ತಿತ್ವ ಎಂದು ಇಂಜಿನಿಯರ್ ಎಂ.ಎ.ನಾಗೇAದ್ರ ತಿಳಿಸಿದರು.

ನಗರದ ಮಧುವನ ಲೇಔಟ್‌ನಲ್ಲಿರುವ ಲಯನ್ಸ್ ಸೇವಾ ಭವನದಲ್ಲಿ ಲಯನ್ಸ್ ಕ್ಲಬ್‌ನಿಂದ ಆಯೋಜಿಸಲಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಅಂಗವಾಗಿ ಇಂಜಿನಿರ‍್ಸ್ ಡೇ ಹಾಗೂ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಅವರ ದೂರದೃಷ್ಠಿಗೆ ಮೈಸೂರಿನ ಕೆಆರ್‌ಎಸ್ ಅಣೆಕಟ್ಟೆ ಸಾಕ್ಷಿಯಾಗಿದೆ. ಅವರಲ್ಲಿದ್ದ ಶಿಸ್ತು, ಸಂಯಮ, ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆ ಇಂದಿನ ಇಂಜಿನಿಯರ್‌ಗಳಿಗೆ ಪ್ರೇರಣೆ ಎಂದರು.
ಭಾರತದ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಉಪನ್ಯಾಸಕ ಎಂ. ತ್ರಿಪುರ ಮಹೇಶ್ವರ ಮಾತನಾಡಿ, ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಮಾಜದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಹಾಗೂ ಮೀಸಲಾತಿ ತಲುಪಬೇಕೆಂಬುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯವಾಗಿತ್ತು. ಆದರೆ ಅವರ ಆಶಯ ಇನ್ನೂ ಪೂರ್ಣಪ್ರಮಾಣದಲ್ಲಿ ಈಡೇರಿಲ್ಲ ಎಂಬುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ತಿಳಿಸಿದರು.
ಭಾರತ ದೇಶದಲ್ಲಿ ಅಸ್ಪಷ್ಯತೆ ಮತ್ತು ಜಾತಿ ವ್ಯವಸ್ಥೆ ತೊಲಗಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ ಎಲ್ಲರಿಗೂ ತಲುಪಬೇಕೆಂಬ ಸಂವಿಧಾನದ ಆಶಯ ಪೂರ್ಣ ಪ್ರಮಾಣದಲ್ಲಿ ಈಡೇರಿಲ್ಲ. ಈ ಮಧ್ಯೆಯೂ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ಹೇಳಿದರು.
ನಗರದ ಐಡಿಎಸ್‌ಜಿ ಕಾಲೇಜಿನ ರಾಜ್ಯಶಾಸ್ತç ಸಹಾಯಕ ಪ್ರಾಧ್ಯಾಪಕ ಎಂ.ತ್ರಿಪುರ ಮಹೇಶ್ವರ ಉಪನ್ಯಾಸ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಪುಷ್ಪರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿ.ಎನ್.ಕುಮಾರ್, ಖಜಾಂಚಿ ಎಂ.ಎA. ಗಿರೀಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net