ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ

h15-guttigedararu
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ನಗರದಲ್ಲಿ ಇಂಜಿನಿಯರ್ ದಿನವನ್ನು ಭಾನುವಾರ ಆಚರಿಸಲಾಯಿತು.
ಸಂಘದ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಭವಿಷ್ಯ ರೂಪಿಸುವಲ್ಲಿ ಸಾಕಷ್ಟು ಕೊಡುಗೆ ನೀಡಿದವರು ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯನವರು. ಅವರ ಜನ್ಮದಿನ ನಿಮಿತ್ತ ಇಂಜಿನಿಯರ್ ದಿನ ಆಚರಿಸಲಾಗುತ್ತಿದೆ. ವಿಶ್ವೇಶ್ವರಯ್ಯನವರು ತಮ್ಮ ತಾಂತ್ರಿಕ ಕುಶಲತೆಯಿಂದ ನಮ್ಮ ನಾಡು ಹಾಗೂ ದೇಶಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ನಮ್ಮ ದೇಶದಲ್ಲಿ ಕಟ್ಟಿದ ಅಣೆಕಟ್ಟು ನಿರ್ಮಿಸಿದ ಭಾಗ್ಯವಿಧಾತ. ಅವರ ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ ಇಂದಿನ ಯುವ ಇಂಜಿನಿಯರ್‌ಗಳಿಗೆ ಮಾದರಿಯಾಗಬೇಕು ಎಂದರು.
ಕಾರ್ಯದರ್ಶಿ ವಿರೂಪಾಕ್ಷಪ್ಪ ಬಳ್ಳೊಳ್ಳಿ ಮಾತನಾಡಿದರು.
ಗುತ್ತಿಗೆದಾರರಾದ ಬಸವರಾಜ ಸಜ್ಜನ್, ಶಿವಾನಂದ, ಎಸ್.ಸಿ. ಕಮ್ಮಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net